ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಅನುದಾನದ ಬಗ್ಗೆ ಹೇಳುತ್ತಿರುವ ಹಸಿ ಸುಳ್ಳು ಕೇಳಿ
ಬೆಂಗಳೂರು: ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಅಧೋಗತಿಗೆ ಇಳಿದಿದೆ. ಕರ್ನಾಟಕ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಕೊಲೆ, ಸುಲಿಗೆ, ಅತ್ಯಾಚಾರ ನಿರಂತರವಾಗಿ ನಡೆಯುತ್ತಿವೆ. ರಾಜ್ಯದ ಜನ ನಿತ್ಯ ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ಆದರೆ ಇವೆಲ್ಲವನ್ನು ಮುಚ್ಚಿಟ್ಟುಕೊಳ್ಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುವ ಪ್ರಯತ್ನ ಮಾಡುತ್ತಿದೆ.
ರಾಜ್ಯಕ್ಕೆ ಕನ್ನಡ ವಿರೋಧಿ ಕಾಂಗ್ರೆಸ್ ನೇತೃತ್ವದ ಸರ್ಕಾರ 2009 ರಿಂದ 2014ರವರೆಗೆ ನೀಡಿದ ಹಣ 73, 209 ಕೋಟಿ ರೂಪಾಯಿ ಮಾತ್ರ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ 2018ರವರೆಗೆ ಕೇವಲ ಮೂರು ವರ್ಷದಲ್ಲಿ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ನೀಡಿದ ಹಣ 1,35,089 ಕೋಟಿ ರೂಪಾಯಿ.
ಪ್ರಸ್ತುತ ಕೇಂದ್ರ ಸರ್ಕಾರ ಕೇವಲ ಮೂರು ವರ್ಷದಲ್ಲೇ 1,35,089 ಕೋಟಿ ರೂಪಾಯಿ ನೀಡುವ ಮೂಲಕ ರಾಜ್ಯದ ಅಭಿವೃದ್ಧಿ ಸಹಕಾರ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ನೀಡಿಲ್ಲ, ಅಭಿವೃದ್ಧಿಗೆ ಸಹಕರಿಸುತ್ತಿಲ್ಲ ಎಂದು ಹೇಳುತ್ತಲೇ ಸಿದ್ದರಾಮಯ್ಯ ರಾಜ್ಯದ ಜನರಿಗೆ ವಂಚಿಸುತ್ತಿದ್ದಾರೆ.
ಕೇಂದ್ರ ಸರ್ಕಾರ ನೀಡಿರುವ ಹಣವನ್ನು ಸಮರ್ಪಕವಾಗಿ ಬಳಸಿಕೊಳ್ಳದೇ, ವಿನಾಕಾರಣ ಆರೋಪಗಳಿಂದ ಕೇಂದ್ರ ಸರ್ಕಾರವನ್ನು ದೂಷಿಸುವ ಕಾರ್ಯವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ.
Leave A Reply