• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸುಷ್ಮಾ ಸ್ವರಾಜ್ ರಾಜತಾಂತ್ರಿಕ ನೈಪುಣ್ಯ, 22 ಭಾರತೀಯರ ರಕ್ಷಣೆ

TNN Correspondent Posted On February 7, 2018
0


0
Shares
  • Share On Facebook
  • Tweet It

ದೆಹಲಿ: ಬಲಿಷ್ಠ ಮತ್ತು ಸೌಹಾರ್ದಯುತ ವಿದೇಶಾಂಗ ನೀತಿಗಳ ಮೂಲಕ ವಿಶ್ವದ ಗಮನ ಸೆಳೆಯುತ್ತಿರುವ ಭಾರತಕ್ಕೆ ವಿಶ್ವ ಸಮುದಾಯದಲ್ಲಿ ನಿರಂತರ ಯಶಸ್ಸು ದೊರೆಯುತ್ತಿದೆ. ಭಾರತೀಯರು ಯಾವುದೇ ರಾಷ್ಟ್ರದಲ್ಲೂ ಸ್ವಾತಂತ್ರ್ಯವಾಗಿ ಜೀವಿಸಬಹುದು ಎಂಬ ಭಾವನೆಗೆ ಬಲ ಬರುತ್ತಿದೆ. ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಾಜತಾಂತ್ರಿಕ ನೈಪುಣ್ಯಗಳನ್ನು ಮೆರೆಯುತ್ತಿದ್ದಾರೆ. ಇದೀಗ ಸುಷ್ಮಾ ಸ್ವರಾಜ್  ಆಫ್ರಿಕಾ ಬೆನಿನ್ ಕರಾವಳಿಯಿಂದ ಅಪಹರಣಗೊಂಡಿದ್ದ ಇಂಧನ ಹಡಗಿನಲ್ಲಿದ್ದ 22 ಭಾರತೀಯರನ್ನು ಯಶಸ್ವಿಯಾಗಿ ರಕ್ಷಣೆ ಮಾಡುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದಾರೆ.

ಫೆ.1 ರಂದು ಪಶ್ಚಿಮ ಆಫ್ರಿಕಾ ಕರಾವಳಿಯಿಂದ ಹಡಗು ನಾಪತ್ತೆಯಾಗಿತ್ತು.  ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ನನಗೆ ತುಂಬಾ ಸಂತೋಷವಾಗುತ್ತಿದೆ. 22 ಭಾರತೀಯ ಪ್ರಜೆಗಳಿದ್ದ ಹಡಗನ್ನು ಅಪಹರಣಕಾರರು ಬಿಡುಗಡೆ ಮಾಡಿದ್ದಾರೆ. ಸಹಾಯ ಮಾಡಿದ ನೈಜೇರಿಯಾ ಹಾಗೂ ಬಿನಿನ್ ಗೆ ಧನ್ಯವಾದಗಳನ್ನು ಹೇಳಿದ್ದಾರೆ.

ನೈಜೀರಿಯಾ ವಿದೇಶಾಂಗ ಇಲಾಖೆಯೊಂದಿಗೆ ಸಂಪರ್ಕ ಮಾಡಿದ್ದು, ಅವರು ಸಹಕಾರ ನೀಡುವುದಾಗಿ ತಿಳಿಸಿದ್ದರು ಎಂದು ಇತ್ತೀಚೆಗೆ ಸುಷ್ಮಾ ಸ್ವರಾಜ್ ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದರು,

13,500 ಟನ್ ಗ್ಯಾಸೋಲಿನ್ ಹೊಂದಿದ್ದ ಹಡಗನ್ನು ಹೈಜಾಕ್ ಮಾಡಲಾಗಿತ್ತು. ಇದಕ್ಕೂ ಮುನ್ನ ಹಡಗಿನ ಎಲ್ಲಾ ಸಂವಹನ ವ್ಯವಸ್ಥೆಗಳನ್ನು ಕಡಿತಗೊಳಿಸಿದ್ದರು. ಹಡಗನ್ನು ಗಲ್ಫ್ ನ ಬೆನಿನ್ ಗಿನಿಯ ಪ್ರದೇಶದಲ್ಲಿ ನಿಲ್ಲಿಸಿದ್ದರು ಎಂದು ತಿಳಿದುಬಂದಿದೆ.

ಮುಂಬೈ ಮೂಲದ ಆಂಗ್ಲೋ ಇಸ್ಟ್ರನ್ ಕಂಪನಿ ಮಾಲೀಕತ್ವದ ಇಂಧನ ಹಡಗು ಕಾಣೆಯಾಗಿರುವ ಶಂಕೆ ಇತ್ತು. ಆದರೆ ನಂತರ ಅಪಹರಣವಾಗರುವುದು ದೃಢಪಟ್ಟಿತ್ತು. ಹಡಗು ಶೋಧಕ್ಕೆ ಸಹಾಯ ಮಾಡುವಂತೆ ಹಡಗು ಮಾಲೀಕರು ಮುಂಬೈನ ನೌಕ ಮಹಾನಿರ್ದೇಶನಾಲಯಕ್ಕೆ ಮನವಿ ಮಾಡಿದ್ದರು.  ಭಾರತೀಯ ವಿದೇಶಾಂಗ ಇಲಾಖೆ ನೈಜೀರಿಯಾ ದೇಶದ ಸಹಾಯ ಪಡೆದು ಪತ್ತೆ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಾಜತಾಂತ್ರಿಕ ನೈಪುಣ್ಯತೆ ಮೆರೆದಿದ್ದು, ನೇರವಾಗಿ ನೈಜೇರಿಯಾದ ಅಧಿಕಾರಿಗಳೊಂದಿಗೆ ಮಾತನಾಡಿ, ಹಡಗು ಬಿಡುಗಡೆಯಲ್ಲಿ ಯಶಸ್ವಿಯಾಗಿ 22 ಭಾರತೀಯರ ಜೀವ ಉಳಿಸಿದ್ದಾರೆ.

I am happy to inform that Merchant Ship Marine Express with 22 Indian nationals on board has been released.

— Sushma Swaraj (@SushmaSwaraj) February 6, 2018

We are delighted to report that the MT Marine Express, which was hijacked by pirates on Feb 1, is now back under the command of the captain & crew since ~04:00 SG time today. All crew members are reported to be safe & well & the cargo intact. We thank you all for your well wishes

— Anglo-Eastern (@angloeasterngrp) February 6, 2018

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search