ಕಲ್ಲೆಸೆಯುವರಿಂದ ಯೋಧರ ಮಾನವ ಹಕ್ಕುಗಳನ್ನು ರಕ್ಷಿಸಿ: ಆಯೋಗಕ್ಕೆ ಯೋಧರ ಮಕ್ಕಳ ಮನವಿ
ದೆಹಲಿ: ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕವಾದಿಗಳ ಮೇಲೆ ದಾಳಿ ಮಾಡಿ, ಮಾನವ ಹಕ್ಕು ಉಲ್ಲಂಘಿಸಲಾಗುತ್ತಿದೆ ಎಂದು ಬೊಬ್ಬೆ ಹೊಡೆಯುವ ಮಾನವ ಹಕ್ಕುಗಳ ಹೋರಾಟಗಾರರಿಗೆ ಯೋಧರ ಮಕ್ಕಳು ಮನವಿಯನ್ನು ಮಾಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರ ಮೇಲಿನ ಪ್ರಕರಣಗಳನ್ನು ಹಿಂಪಡೆದಿರುವ ವಿಚಾರ ಚರ್ಚೆಯಲ್ಲಿರುವಾಗಲೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನಮ್ಮ ಮೂಲಭೂತ ಹಕ್ಕುಗಳನ್ನು ರಕ್ಷಿಸಿ ಎಂದು ಯೋಧರ ಮಕ್ಕಳು ಮನವಿ ಮಾಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಿತ್ಯ ಸೈನಿಕರನ್ನು ಗುರಿಯಾಗಿಟ್ಟುಕೊಂಡು ಕಲ್ಲು ಎಸೆಯುವುದು, ವಿನಾಕಾರಣ ಕಿರುಕುಳ ನೀಡಲಾಗುತ್ತದೆ. ಅದರಿಂದ ನಮ್ಮ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡತಾಗುತ್ತಿದೆ. ಅವರಿಂದ ನಮ್ಮ ಮೂಲಭೂತ ಹಕ್ಕುಗಳನ್ನು ರಕ್ಷಿಸಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
‘ಯುವ ಭಾರತೀಯರು, ದೇಶದ ಹೆಮ್ಮೆಯ ನಾಗರೀಕರು ಮತ್ತು ವಿಶೇಷವಾಗಿ ಯೋಧರ ಮಕ್ಕಳು. ನಾವು ದೇಶಕ್ಕಾಗಿ ನಿತ್ಯ ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ಯೋಧರ ಬಗ್ಗೆ ನಾವು ಕಾಳಜಿ ವಹಿಸಬೇಕಾದ ಸಂದರ್ಭ ಎದುರಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಎಲ್ಲರ ಹಕ್ಕುಗಳನ್ನು ರಕ್ಷಿಸಬೇಕು. ದೇಶಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಯೋಧರ ಮೇಲೆ ಕಲ್ಲು ಎಸೆಯುವುದು ಸೇರಿ ನಾನಾ ಸಮಸ್ಯೆಗಳನ್ನು ಒಡ್ಡಲಾಗುತ್ತಿದೆ. ಆದ್ದರಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರುವ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಇತರೇ ದೇಶಗಳಿಗೆ ಹೋಲಿಸಿದರೇ ಭಾರತದಲ್ಲಿ ಮಾನವ ಹಕ್ಕುಗಳ ಹೆಸರಲ್ಲಿ ತಡೆಯೊಡ್ಡಲಾಗುತ್ತಿದೆ. ಈ ಕುರಿತು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಯೋಧರ ರಕ್ಷಣೆಯ ಹಿತದೃಷ್ಟಿಯಿಂದ ಕೆಲವು ಕ್ರಮಗಳನ್ನು ಮಾನವ ಹಕ್ಕುಗಳ ಆಯೋಗ ಕೈಗೊಳ್ಳಬೇಕು. ಯೋಧರ ವಿರುದ್ಧ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆಯೂ ಯೋಚಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Leave A Reply