ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರೊಬ್ಬರ ಬಂಧನ
ತುಮಕೂರು: ಎಚ್.ವೈ.ಮೇಟಿ, ತನ್ವೀರ್ ಸೇಠ್ ಬಳಿಕ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಲೈಂಗಿಕ ಹಗರಣ ಆರೋಪ ಎದುರಿಸುತ್ತಿದ್ದು, ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಪ್ತರೊಬ್ಬರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಪೀಣ್ಯದ ದೊಡ್ಡಬಿದರಕಲ್ಲಿನ ಬಳಿಯ ಮನೆಯೊಂದರ ಮೇಲೆ ಸಿಸಿ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ತುಮಕೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಕೃಷ್ಣಯ್ಯ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ.
ರಾಮಕೃಷ್ಣಯ್ಯ ಅವರನ್ನು ಸಿಸಿಬಿ ಪೊಲೀಸರು ಪೀಣ್ಯ ಪೋಲಿಸರಿಗೆ ಹಸ್ತಾಂತರಿಸಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಇಂದು ನ್ಯಾಯಾಲಯಕ್ಕೆ ಹಾಜರಿಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
ರಾಮಕೃಷ್ಣಯ್ಯ ಅವರು ಪಕ್ಷದ ಹಲವು ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಗುರುತಿಸಿಕೊಂಡಿದ್ದರು. ಆದರೆ ಪ್ರಸ್ತುತ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯಲ್ಲೇ ರಾಮಕೃಷ್ಣಯ್ಯ ಸಿಕ್ಕಿಬಿದ್ದಿದ್ದು, ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ಸಿಗೆ ಈ ಪ್ರಕರಣ ಹಿನ್ನಡೆಯಾಗುವ ಸಾಧ್ಯತೆ ಇದೆ.
Leave A Reply